ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮುಸ್ಲಿಂ ಸಮುದಾಯದವರೊಂದಿಗೆ ಶಾಂತಿ ಸಭೆ ನಡೆಸಲಾಯಿತು.
ಭದ್ರಾವತಿ, ಜು. ೭: ನಗರದಲ್ಲಿ ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸುವ ಮೂಲಕ ಸೌಹಾರ್ದತೆ ಮೂಡಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಗುರುವಾರ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಮುಸ್ಲಿಂ ಸಮುದಾಯದವರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುಸ್ಲಿಂ ಸಮುದಾಯದವರು ಸಡಗರ, ಸಂಭ್ರಮದಿಂದ ಹಬ್ಬ ಆಚರಿಸಬೇಕು. ಯಾವುದೇ ರೀತಿ ಆಶಾಂತಿ ವಾತಾವರಣಕ್ಕೆ ಅವಕಾಶ ಕಲ್ಪಿಸಿಕೊಡಬಾರದು. ಹಬ್ಬದ ಆಚರಣೆಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಲಾಯಿತು.
ಮುಸ್ಲಿಂ ಸಮುದಾಯದ ಪ್ರಮುಖರು, ಹಬ್ಬದ ಸಂದರ್ಭದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆ ಗಮನಕ್ಕೆ ತರುವ ಜೊತೆಗೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಬ್ಬ ಆಚರಿಸು ವಿಶ್ವಾಸ ವ್ಯಕ್ತಪಡಿಸಿದರು.
ಮುಸ್ಲಿಂ ಸಮುದಾಯದ ಪ್ರಮುಖರಾದ ಅಂಜುಮಾನ್ ಇಸ್ಲಾಹುಲ್ ಮುಸ್ಲಿಂಮೀನ್ ಅಧ್ಯಕ್ಷ ಮುರ್ತುಜಾಖಾನ್, ನಗರಸಭೆ ಸದಸ್ಯ ಸೈಯದ್ ರಿಜ್ವಾನ್, ಮಾಜಿ ಸದಸ್ಯ ಬಾಬಾಜಾನ್, ಅಮೀರ್‌ಜಾನ್, ಫೀರ್ ಷರೀಫ್, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಸ್ವಾಗತಿಸಿದರು.
No comments:
Post a Comment