ಭದ್ರಾವತಿ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಕ್ಕಳ ತಜ್ಞ ಡಾ.ಕೆ.ಜೆ ರಾಜೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೪: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರೀಯ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ವಿದ್ಯಾಸಂಸ್ಥೆಯ ಹಳೇಯ ವಿದ್ಯಾರ್ಥಿ, ನಗರದ ಪ್ರಗತಿ ಮಕ್ಕಳ ಚಿಕಿತ್ಸಾಲಯದ ವೈದ್ಯ ಡಾ.ಕೆ.ಜೆ ರಾಜೇಂದ್ರ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಕೆ.ಜೆ ರಾಜೇಂದ್ರ, ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಶಾಲಾ ದಿನಗಳು ಇಂದಿಗೂ ಅವಿಸ್ಮರಣೀಯವಾಗಿ ಉಳಿದುಕೊಂಡಿದ್ದು, ವೈದ್ಯರ ದಿನಾಚರಣೆಯಲ್ಲಿ ನನ್ನನ್ನು ಆಹ್ವಾನಿಸಿ ಸನ್ಮಾನಿಸುವ ಮೂಲಕ ಅಭಿನಂದಿಸುತ್ತಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ ಎಂದರು.
ವಿದ್ಯಾ ಸಂಸ್ಥೆಯ ಕಾರ್ಯಾಧ್ಯಕ್ಷ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಜೆ.ಆರ್ ಆಶಾ ಪ್ರಾರ್ಥಿಸಿದರು. ಕವಿತ ನಿರೂಪಿಸಿದರು. ರೇವತಿ ಸ್ವಾಗತಿಸಿ ರವಿ ವಂದಿಸಿದರು.
No comments:
Post a Comment