Friday, July 8, 2022

ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷರಾಗಿ ನಿಯೋಜನೆಗೊಂಡ ಜಿ. ಧರ್ಮಪ್ರಸಾದ್

ಸಂಸದ ಬಿ.ವೈ ರಾಘವೇಂದ್ರ ಅಭಿನಂದನೆ

ಭದ್ರಾವತಿ ತಾಲೂಕು ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ  ಜಿ. ಧರ್ಮಪ್ರಸಾದ್ ಅವರನ್ನು ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ಅಭಿನಂದಿಸಿದರು.
    ಭದ್ರಾವತಿ, ಜು. ೮: ತಾಲೂಕು ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ  ಜಿ. ಧರ್ಮಪ್ರಸಾದ್ ಅವರನ್ನು ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ಅಭಿನಂದಿಸಿದರು.
      ವಿದ್ಯಾರ್ಥಿ ಪರಿಷತ್ ಮೂಲಕ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾರ್ಯನಿರ್ವಹಿಸುತ್ತಿದ್ದ ಜಿ. ಧರ್ಮಪ್ರಸಾದ್ ಅವರನ್ನು ತಾಲೂಕು ಮಂಡಲ ನೂತನ ಅಧ್ಯಕ್ಷರನ್ನಾಗಿ ನಿಯೋಜನೆಗೊಳಿಸಲಾಗಿದೆ. ಮೂಲತಃ ಲೆಕ್ಕ ಪರಿಶೋಧಕರಾಗಿರುವ ಧರ್ಮಪ್ರಸಾದ್ ಅವರು ಕುವೆಂಪು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿದ್ದಾರೆ.
      ಇದುವರೆಗೂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ. ಪ್ರಭಾಕರ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದೆ. ಪ್ರಮುಖರಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಭೋವಿ ನಿಗಮದ ಸದಸ್ಯ ಜಿ. ಆನಂದಕುಮಾರ್, ತಾ.ಪಂ. ಮಾಜಿ ಸದಸ್ಯ ಕೆ. ಮಂಜುನಾಥ್, ಬಿಜೆಪಿ ತಾಲೂಕು ಮಂಡಲ ಕಾರ್ಯದರ್ಶಿ ಚಂದ್ರು ದೇವರನರಸೀಪುರ, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment