ಜು.೨೪ರಂದು ಊಟಿಯಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ
ಎಂ.ಆರ್ ರೇವಣಪ್ಪ
ಭದ್ರಾವತಿ, ಜು. ೨೩: ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.
ರೇವಣಪ್ಪ ಅವರು ಶಿಕ್ಷಕ ವೃತ್ತಿಯೊಂದಿಗೆ ಜಾನಪದ ಸಾಹಿತ್ಯ, ರಂಗಭೂಮಿ ಕಲೆಯನ್ನು ಸಹ ಮೈಗೂಡಿಸಿಕೊಂಡಿದ್ದು, ರಾಷ್ಟ್ರ ಹಾಗು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.
ಜು.೨೪ರಂದು ಊಟಿಯಲ್ಲಿ ನಡೆಯುತ್ತಿರುವ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ರೇವಣಪ್ಪ ಅವರು ಪದವಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಹಾಗು ಶಿವಮೊಗ್ಗ ಜಿಲ್ಲಾ ಜಾನಪದ ಕಲೆ ಹಾಗು ಸಾಹಿತ್ಯ ವೇದಿಕೆ, ಶಿಕ್ಷಕ ವೃಂದ ಮತ್ತು ಅಭಿಮಾನಿಗಳು ರೇವಣಪ್ಪ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment