Friday, July 8, 2022

ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆಗೆ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ

ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಜು. ೮: ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
      ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಒಟ್ಟು ೪೦ ಲಕ್ಷ ರು. ವೆಚ್ಚದಲ್ಲಿ ೪ ರಸ್ತೆಗಳ ನಿರ್ಮಾಣಕ್ಕೆ ಸಂಸದರು ಗುದ್ದಲಿ ಪೂಜೆ ನೆರವೇರಿಸಿದರು. ನೀರಾವರಿ ಇಲಾಖೆ ಭದ್ರಾ ಮೇಲ್ದಂಡೆ ವಿಭಾಗದಿಂದ ಕಾಮಗಾರಿ ಮಂಜೂರಾಗಿದ್ದು, ಗುತ್ತಿಗೆದಾರರಾಗಿ ಅಶೋಕ್ ಕಾಮಗಾರಿ ನಿರ್ವಹಿಸುತ್ತಿದ್ದಾರೆ.
      ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ತಾಲೂಕು ಮಂಡಲ ನಿಯೋಜಿತ ಅಧ್ಯಕ್ಷ ಜಿ. ಧರ್ಮಪ್ರಸಾದ್, ಎಂ. ಪ್ರಭಾಕರ್, ಕಾರ್ಯದರ್ಶಿ ಚಂದ್ರು ದೇವರನರಸೀಪುರ, ಕಾಚಗೊಂಡನಹಳ್ಳಿ ಬಿ. ಮಂಜುನಾಥ್, ರಾಮನಾಥ್ ಬರ್ಗೆ, ಕೆ. ಮಂಜುನಾಥ್, ಧನುಷ್‌ಬೋಸ್ಲೆ, ತೀರ್ಥಯ್ಯ, ಕವಿತಾರಾವ್, ಭಾಗಿರತಿ, ಗ್ರಾಮ ಪಂಚಾಯಿತಿ ಸದಸ್ಯ ಬಿ. ಮೋನಿಷಾ, ಗ್ರಾಮಸ್ಥರಾದ ಜೀಜಾಬಾಯಿ, ಮೀನಾ, ನಂದಿನಿ, ಕವಿತ, ರತ್ನಾಬಾಯಿ, ರೂಪ, ಆನಂದರಾವ್, ನರೇಂದ್ರ, ಮಂಜುನಾಥ್ ಗಾಯಕ್‌ವಾಡ್ ಸೇರಿದಂತೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment