ಜಗದೀಶ್ ಅವರನ್ನು ಜಯಕರ್ನಾಟಕ ಜನಪರ ವೇದಿಕೆ ಭದ್ರಾವತಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಎಸ್.ಕೆ ರಘುವೀರ್ ಸಿಂಗ್ ಆದೇಶ ಪತ್ರ ವಿತರಿಸಿದರು.
ಭದ್ರಾವತಿ, ಜು. ೨೦: ನಗರದ ಬಿ.ಎಚ್ ರಸ್ತೆ ೧ನೇ ತಿರುವಿನ ನಿವಾಸಿ ಜಗದೀಶ್ ಅವರನ್ನು ಜಯಕರ್ನಾಟಕ ಜನಪರ ವೇದಿಕೆ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.
ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎಸ್.ಕೆ ರಘುವೀರ್ ಸಿಂಗ್ ಜಗದೀಶ್ ಅವರನ್ನು ನೇಮಕಗೊಳಿಸಿ ಆದೇಶ ಪತ್ರ ವಿತರಿಸಿ ಮಾತನಾಡಿದರು.
ಸಾಮಾಜಿಕ ಕಳಕಳಿಯೊಂದಿಗೆ ಅಶಕ್ತ ಜನರ ಧ್ವನಿಯಾಗಿ ಹೋರಾಟ ನಡೆಸುವ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವೇದಿಕೆಯಲ್ಲಿರುವ ಪ್ರತಿಯೊಬ್ಬರು ಶ್ರಮಿಸಬೇಕೆಂದರು.
ವೇದಿಕೆ ರಾಜ್ಯ ಯುವ ಸಂಸ್ಥಾಪಕರಾದ ಬಿ. ಗುಣರಂಜನ್ ಶೆಟ್ಟಿ ಹಾಗು ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪನವರ ಸಲಹೆ ಮೇರೆಗೆ ತಾಲೂಕು ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಡಲಾಗುತ್ತಿದೆ. ಎಲ್ಲರ ಸಹಕಾರ ಪಡೆದು ವೇದಿಕೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ವೇದಿಕೆ ಪ್ರಮುಖರಾದ ಜಿಲ್ಲಾ ಮುಖಂಡ, ನಗರಸಭೆ ಮಾಜಿ ಸದಸ್ಯ ಫ್ರಾನ್ಸಿಸ್, ಜಿಲ್ಲಾ ಕಾರ್ಯದರ್ಶಿ ಪ್ರಮೋದ್, ಪ್ರಸನ್ನ, ಸುಬ್ಬು, ಶಶಿಕುಮಾರ್, ಪ್ರವೀಣ್, ರಘು, ರಾಜೇಶ್, ಮದನ್, ಪ್ರಮೋದ್, ಪ್ರಸನ್ನ ಸೇರಿದಂತೆ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.
No comments:
Post a Comment