ಕಳೆದ ೨ ದಿನಗಳಿಂದ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಿಂದ ಉಂಟಾಗಿದ್ದ ಪ್ರವಾಹ ಸ್ವಲ್ಪಮಟ್ಟಿಗೆ ತಗ್ಗಿದ್ದು, ಈ ನಡುವೆ ಭಾನುವಾರ ಪತಂಜಲಿ ಯೋಗ ಸಂಸ್ಥೆ ಹಾಗು ಪದ್ಮಾಂಭ ಸ್ವಯಂ ಸೇವಾ ಸಂಸ್ಥೆಯ ಮಹಿಳೆಯರಿಂದ ಬಾಗಿನ ಸಮರ್ಪಿಸಲಾಯಿತು.
ಭದ್ರಾವತಿ, ಜು. ೧೭: ಕಳೆದ ೨ ದಿನಗಳಿಂದ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಿಂದ ಉಂಟಾಗಿದ್ದ ಪ್ರವಾಹ ಸ್ವಲ್ಪಮಟ್ಟಿಗೆ ತಗ್ಗಿದ್ದು, ಈ ನಡುವೆ ಭಾನುವಾರ ಪತಂಜಲಿ ಯೋಗ ಸಂಸ್ಥೆ ಹಾಗು ಪದ್ಮಾಂಭ ಸ್ವಯಂ ಸೇವಾ ಸಂಸ್ಥೆಯ ಮಹಿಳೆಯರಿಂದ ಬಾಗಿನ ಸಮರ್ಪಿಸಲಾಯಿತು.
ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ನಂತರ ಬಾಗಿನ ಸಮರ್ಪಿಸುವ ಮೂಲಕ ರೈತರು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಭದ್ರೆ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸಲಾಯಿತು.
ಪದ್ಮಾಂಭ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಗೌರಮ್ಮ, ಸರ್ವೇಶ್ವರಿ, ಕೋಕಿಲಾ, ವಾಣಿಶ್ರೀ, ಶೋಭಾ, ಅನಿತಾ, ಉಷಾ, ಶೋಭಾ, ಪ್ರತಿಭಾ, ಪ್ರೀತಿ, ಸುಶೀಲಾ, ಅಶ್ವಿನಿ, ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment