ಭದ್ರಾವತಿ ನಗರಸಭೆ ವಾರ್ಡ್ ನಂ.೩ರ ಗೌಳಿಗರ ಬೀದಿ ೧೩ನೇ ರಸ್ತೆಯಲ್ಲಿರುವ ಶಿಶುವಿಹಾರ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ತಾತ್ಕಾಲಿಕವಾಗಿ ಈ ಕಟ್ಟಡವನ್ನು ದುರಸ್ತಿಗೊಳಿಸಿ ಮಕ್ಕಳ ಕಲಿಕೆಗೆ ನೆರವಾಗುವ ಮೂಲಕ ಹೊಸದಾಗಿ ಶಿಶುವಿಹಾರ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ನಗರಸಭೆ ಆಡಳಿತಕ್ಕೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೧ : ನಗರಸಭೆ ವಾರ್ಡ್ ನಂ.೩ರ ಗೌಳಿಗರ ಬೀದಿ ೧೩ನೇ ರಸ್ತೆಯಲ್ಲಿರುವ ಶಿಶುವಿಹಾರ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ತಾತ್ಕಾಲಿಕವಾಗಿ ಈ ಕಟ್ಟಡವನ್ನು ದುರಸ್ತಿಗೊಳಿಸಿ ಮಕ್ಕಳ ಕಲಿಕೆಗೆ ನೆರವಾಗುವ ಮೂಲಕ ಹೊಸದಾಗಿ ಶಿಶುವಿಹಾರ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ನಗರಸಭೆ ಆಡಳಿತಕ್ಕೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಶಿಶುವಿಹಾರ ಕಟ್ಟಡ ಸುಮಾರು ೪೫ ವರ್ಷಗಳಿಗೂ ಹಳೇಯದಾಗಿದ್ದು, ತುಂಬಾ ಶಿಥಿಲಗೊಂಡಿದೆ. ಮಕ್ಕಳು ಶಿಶುವಿಹಾರಕ್ಕೆ ಹೋಗದೆ ಕಲಿಕೆಯಿಂದ ವಂಚಿತರಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಥಿಲಗೊಂಡಿರುವ ಕಟ್ಟಡ ತಕ್ಷಣ ದುರಸ್ತಿಗೊಳಿಸದಿದ್ದಲ್ಲಿ ಅನಾಹುತ ಖಚಿತ. ಮಕ್ಕಳ ಭವಿಷ್ಯದ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದು ಹಾಗು ಹೊಸದಾಗಿ ಶಿಶುವಿಹಾರ ನಿರ್ಮಾಣ ಮಾಡುವ ಮೂಲಕ ಮಕ್ಕಳ ಕಲಿಕೆಗೆ ಎಲ್ಲಾ ರೀತಿ ಸೌಲರ್ಭ್ಯಗಳನ್ನು ಕಲ್ಪಿಸಿಕೊಡುವಂತೆ ಆಗ್ರಹಿಸಲಾಗಿದೆ.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್ ಅವರಿಗೆ ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಫ್ರಾನ್ಸಿಸ್, ಮಂಜುಳಮ್ಮ, ಪ್ರವೀಣ, ಶಿವು, ಭೂಪಾಲ್, ಮದನ್, ಪುರುಷೋತ್ತಮ್, ಗೀತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment