Monday, August 8, 2022

ಆರ್‌ಎಎಫ್ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಜಾಗೃತಿ

ರಾಷ್ಟ್ರ ಧ್ವಜ ಖರೀದಿ ಮಾಡಿ ಜಾಗೃತಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಿಗೆ ರಾಷ್ಟ್ರ ಧ್ವಜ ವಿತರಣೆ

ಭದ್ರಾವತಿ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ರ್‍ಯಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್) ೯೭ ಬೆಟಾಲಿಯನ್ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೋಮವಾರ ರಾಷ್ಟ್ರ ಧ್ವಜಗಳನ್ನು ವಿತರಿಸಲಾಯಿತು.
    ಭದ್ರಾವತಿ, ಆ. ೮: ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ರ್‍ಯಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್) ೯೭ ಬೆಟಾಲಿಯನ್ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೋಮವಾರ ರಾಷ್ಟ್ರ ಧ್ವಜಗಳನ್ನು ವಿತರಿಸಲಾಯಿತು.
    ಕಾರ್ಯಕ್ರಮಕ್ಕೆ ತಹಸೀಲ್ದಾರ್ ಆರ್. ಪ್ರದೀಪ್ ಚಾಲನೆ ನೀಡಿದರು. ರಂಗಪ್ಪ ವೃತ್ತ, ತಾಲೂಕು ಕಛೇರಿ ರಸ್ತೆ, ಸಿ.ಎನ್ ರಸ್ತೆ, ಹೊಸಮನೆ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ರಾಷ್ಟ್ರ ಧ್ವಜಗಳನ್ನು ವಿತರಿಸಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವಂತೆ ಜಾಗೃತಿ ಮೂಡಿಸಲಾಯಿತು.
    ಆರ್‌ಎಎಫ್ ೯೭ ಬೆಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಭಾರತಿ, ಎಎಸ್‌ಐ ಈಶ್ವರ್,  ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್, ಮಾಜಿ ಸೈನಿಕರ ಸಂಘದ ಪ್ರಮುಖರಾದ ಸುಬೇದಾರ್ ಗುಳ್‌ಗುಳೆ, ಬೋರೇಗೌಡ, ಉಮೇಶ್, ರಮೇಶ್, ಕೃಷ್ಣೋಜಿರಾವ್, ಗಿರೀಶ್, ಶ್ರೀಧರ್, ಕವಿತಾರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರು ಸೋಮವಾರ ರಾಷ್ಟ್ರ ಧ್ವಜ ಖರೀದಿಸಿ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.
    ರಾಷ್ಟ್ರ ಧ್ವಜ ಖರೀದಿ :
    ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರು ಸೋಮವಾರ ರಾಷ್ಟ್ರ ಧ್ವಜ ಖರೀದಿಸಿ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.
    ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಸ್ವಂತ ಹಣದಲ್ಲಿ ರಾಷ್ಟ್ರ ಖರೀದಿಸಿ ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿಯಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ವ್ಯವಸ್ಥಾಪಕಿ ಸುನೀತಾಕುಮಾರಿ, ಸಮುದಾಯ ಸಂಘಟನಾಧಿಕಾರಿ ಸುವಾಸಿನಿ ಸೇರಿದಂತೆ ನಗರಸಭೆ ಸದಸ್ಯರು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನಾದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಮುಂದಾಗಿದ್ದು, ಬೂತ್‌ಮಟ್ಟದಲ್ಲಿ ಅಭಿಯಾನ ಕುರಿತು ಜಾಗೃತಿ ಮೂಡಿಸಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಗಿದೆ.
    ಮಹಾಶಕ್ತಿ ಕೇಂದ್ರದ ಅಧ್ಯಕ್ಷರಿಗೆ ರಾಷ್ಟ್ರ ಧ್ವಜ ವಿತರಣೆ :
    ತಾಲೂಕಿನಾದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಮುಂದಾಗಿದ್ದು, ಬೂತ್‌ಮಟ್ಟದಲ್ಲಿ ಅಭಿಯಾನ ಕುರಿತು ಜಾಗೃತಿ ಮೂಡಿಸಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಗಿದೆ.
ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಅಭಿಯಾನ ಕುರಿತು ಹೆಚ್ಚಿನ ಮಾಹಿತಿ ನೀಡುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದರು.

No comments:

Post a Comment