ಭದ್ರಾವತಿ, ಆ. ೧೪: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆ.೧೫ರಂದು ಬೆಳಿಗ್ಗೆ ೯ ಗಂಟೆಗೆ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಪ್ರತಿವರ್ಷ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಹವಾಮಾನ ವೈಪರಿತ್ಯದಿಂದಾಗಿ ಕಾರ್ಯಕ್ರಮವನ್ನು ವಿಇಎಸ್ ವಿದ್ಯಾಸಂಸ್ಥೆ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ವಿದ್ಯಾಸಂಸ್ಥೆಗಳು ಮತ್ತು ಸಾರ್ವಜನಿಕರು ಸಹಕರಿಸುವಂತೆ ಸಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.
No comments:
Post a Comment