Monday, August 8, 2022

ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸಿ : ಮಕ್ಕಳಲ್ಲಿ ಜಾಗೃತಿ ಮೂಡಿಸಿ

ಭದ್ರಾವತಿ ನಗರದೆಲ್ಲೆಡೆ ಅಂಗಡಿ ಮುಂಗಟ್ಟುಗಳಲ್ಲಿ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು, ತಕ್ಷಣ ಮಾರಾಟ ಮಾಡುವುದನ್ನು ತಡೆಗಟ್ಟುವ ಮೂಲಕ ಮಕ್ಕಳಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಅರಿವು ಮೂಡಿಸಬೇಕೆಂದು ಆಗ್ರಹಿಸಿ ಸೋಮವಾರ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಆ. ೮: ನಗರದೆಲ್ಲೆಡೆ ಅಂಗಡಿ ಮುಂಗಟ್ಟುಗಳಲ್ಲಿ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು, ತಕ್ಷಣ ಮಾರಾಟ ಮಾಡುವುದನ್ನು ತಡೆಗಟ್ಟುವ ಮೂಲಕ ಮಕ್ಕಳಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಅರಿವು ಮೂಡಿಸಬೇಕೆಂದು ಆಗ್ರಹಿಸಿ ಸೋಮವಾರ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ದೇಶದ ರಾಷ್ಟ್ರ ಧ್ವಜ ತನ್ನದೇ ಆದ ವಿಶಿಷ್ಟತೆ ಹಾಗು ಗೌರವ ಸ್ಥಾನಮಾನಗಳನ್ನು ಹೊಂದಿದ್ದು, ಇಂತಹ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವಂತೆ ಪ್ಲಾಸ್ಟಿಕ್ ಬಳಸಿ ಸಣ್ಣ ಸಣ್ಣ ಧ್ವಜಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಪ್ರಾಥಮಿಕ ಹಂತದ ಕೆಲವು ಶಾಲಾ ಮಕ್ಕಳಿಗೆ ದೇಶದ ರಾಷ್ಟ್ರ ಧ್ವಜದ ಬಗ್ಗೆ ಅರಿವು ಕಡಿಮೆ ಇದ್ದು, ಮಕ್ಕಳು ಧ್ವಜವನ್ನು ಎಲ್ಲಿ ಬೇಕೆಂದರಲ್ಲಿ ಹಾಕುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮಕ್ಕಳಲ್ಲಿ ರಾಷ್ಟ್ರ ಪ್ರೇಮ, ಗೌರವ ಮತ್ತು ರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.  
    ಸಣ್ಣ ಸಣ್ಣ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದು ಖಂಡನೀಯವಾಗಿದ್ದು, ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದೆ. ಈಗಾಗಲೇ ಸರ್ಕಾರ ಪ್ಲಾಸ್ಟಿಕ್ ನಿಷೇಧಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡದಂತೆ ಅಂಗಡಿಮುಂಗಟ್ಟುಗಳಿಗೆ ಆದೇಶಿಸಬೇಕೆಂದು ಆಗ್ರಹಿಸಲಾಗಿದೆ.
    ವೇದಿಕೆ ಅಧ್ಯಕ್ಷೆ ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ನಗರಸಭೆ ಮಾಜಿ ಸದಸ್ಯ ಫ್ರಾನ್ಸಿಸ್, ಮಾಜಿ ಸೈನಿಕ ರವಿ, ಬಿ.ಆರ್ ಮಂಜುಳ ರಾಮಚಂದ್ರ, ಸುಮಿತ್ರಾ ಅಂಬೋರೆ, ಬಿ.ಕೆ ಗೀತಾ, ಸತ್ಯ ಜಗದೀಶ್, ಬಿ.ಎಂ ಅನಿತಾ, ಪ್ರಸನ್ನಕುಮಾರ್, ಸುಬ್ಬು, ರಾಜೇಶ್, ಅಶೋಕ್, ಆರ್. ಭೂಪಾಲ, ಶ್ರೀನಿವಾಸ್ ಮತ್ತು ಪುರುಷೋತ್ತಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment