ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬೆಲೆ ಏರಿಕೆ ಖಂಡಿಸಿ ಸೋಮವಾರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಆ. ೮: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬೆಲೆ ಏರಿಕೆ ಖಂಡಿಸಿ ಸೋಮವಾರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರು ಮಾತನಾಡಿ, ಬಿಜೆಪಿ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಜನರು ಜೀವನ ನಡೆಸುವುದು ಅಸಾಧ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಉಚಿತ ಅಕ್ಕಿ, ಕಡಿಮೆ ದರದಲ್ಲಿ ಅಡುಗೆ ಅನಿಲ ವಿತರಣೆ ಸೇರಿದಂತೆ ಬಡ ಜನರಿಗೆ ಅನುಕೂಲ ಕಲ್ಪಿಸುವ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂದು ಆಗ್ರಹಿಸಿದರು.
ನಗರ ಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಲತಾ ಚಂದ್ರಶೇಖರ್, ಕಾಂತರಾಜ್, ಮಾಜಿ ಸದಸ್ಯ ಆಂಜನಪ್ಪ, ಪ್ರಮುಖರಾದ ಅಮೀರ್‌ಜಾನ್, ಬಿ. ಗಂಗಾಧರ್, ನಾಗರಾಜ್, ಕೃಷ್ಣಾನಾಯ್ಕ್, ಸಚಿನ್ ಸಿಂಧ್ಯಾ, ಜಿ. ವಿನೋದ್‌ಕುಮಾರ್, ಅಫ್ತಾಬ್ ಅಹಮದ್, ಅಮೋಸ್, ತಬ್ರೇಜ್ ಖಾನ್, ಅಭಿಷೇಕ್, ಸಜ್ಜದ್, ಹರೀಶ್, ಸಯ್ಯದ್, ಕೃಷ್ಣ, ಜಬಿವುಲ್ಲಾ ವಿನಯ್(ಗುಂಡ), ಜಂಕ್ಷನ್ ಇಮ್ರಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment