Thursday, August 25, 2022

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ : ತಾಲೂಕು ಮಟ್ಟಕ್ಕೆ ಆಯ್ಕೆ

ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಯಶ್ರೀ ವೃತ್ತದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ನಗರಸಭಾ ಸದಸ್ಯೆ ನಾಗರತ್ನ ವಿತರಿಸಿದರು.
    ಭದ್ರಾವತಿ, ಆ. ೨೫ : ತಾಲೂಕಿನ ಹೊಸ ಸಿದ್ದಾಪುರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಯಶ್ರೀ ವೃತ್ತದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
      ವಿದ್ಯಾರ್ಥಿಗಳಾದ ಆರ್.ಎಸ್ ಯಶವಂತ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಆರ್. ಸುಶ್ಮಿತಾ ನೀತಿ ಕಥೆಯಲ್ಲಿ ಪ್ರಥಮ, ಖುಷಿ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ನಗರಸಭಾ ಸದಸ್ಯೆ ನಾಗರತ್ನ ವಿತರಿಸಿದರು.
    ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ಶಿವರುದ್ರಯ್ಯ,  ಸಹ ಶಿಕ್ಷರುಗಳಾದ ವೈ.ಕೆ ಲಕ್ಷ್ಮಣ್, ಶಿವಕುಮಾರ್, ಕಲ್ಪನಾ, ಸುಧಾ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಅಭಿನಂದಿಸಿದ್ದಾರೆ.
--

No comments:

Post a Comment