ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದ್ಯಾಸಂಸ್ಥೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಆ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದ್ಯಾಸಂಸ್ಥೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಬಿ. ಸಿದ್ದಬಸಪ್ಪ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರೂ ಸಹ ಆಗಿದ್ದು, ಇತ್ತೀಚೆಗೆ ನಡೆದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಬಿ.ಎಲ್ ರಂಗಸ್ವಾಮಿ, ನಿರ್ದೇಶಕ ಎ ಜೆ ರಂಗನಾಥ ಪ್ರಸಾದ್, ಆಡಳಿತಾಧಿಕಾರಿ ಡಾ. ಎಸ್ ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಪಿಯು ವಿಭಾಗದ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಉಪನ್ಯಾಸಕ ವರ್ಗ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment