ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಶನೈಶ್ವರಸ್ವಾಮಿಯ ಉತ್ಸವ ಮೂರ್ತಿ ಚರಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಆ. ೧೨: ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪನವರ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಶನೈಶ್ವರಸ್ವಾಮಿಯ ಉತ್ಸವ ಮೂರ್ತಿ ಚರಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ವಿಶೇಷ ಅಲಂಕಾರ, ಹೋಮ-ಹವನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನದ ಅರ್ಚಕರು, ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರು, ಸೇವಾಕರ್ತರು, ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment