ಭದ್ರಾವತಿ, ಆ.11: ತಾಲೂಕಿನ ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿ ಗುರುವಾರ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ ಯುಐ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಹಾಗೂ ಸಂಘಟನೆಗೆ ಪ್ರಮುಖ ಮಾತನಾಡಿ, ವಿಶ್ವವಿದ್ಯಾಲಯ ಆ. 8ರಂದು ಸುತ್ತೋಲೆ ಹೊರಡಿಸಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು 1720 ರು. ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಿದೆ. ಇದೀಗ ಸಾಮಾನ್ಯ ವರ್ಗದವರ ಪರೀಕ್ಷಾ ಶುಲ್ಕವನ್ನು ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳು ಪಾವತಿಸುವಂತಾಗಿದೆ. ಬಹುತೇಕ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಕಟ್ಟುವ ಸಾಮರ್ಥ್ಯ ಇರುವುದಿಲ್ಲ ಹಿನ್ನೆಲೆಯಲ್ಲಿ ತಕ್ಷಣ ವಿಶ್ವವಿದ್ಯಾಲಯ ಮಟ್ಟದಲ್ಲಿ ಶುಲ್ಕ ವಿನಾಯಿತಿ ನೀಡುವಂತೆ ಆಗ್ರಹಿಸಿದರು.
ಸಂಘಟನೆ ಅಧ್ಯಕ್ಷ ಮುಸ್ವೀರ್ ಬಾಷಾ, ನಗರ ಸಭಾ ಸದಸ್ಯರಾದ ಕಾಂತರಾಜು, ರಿಯಾಜ್ ಅಹ್ಮದ್, ಬಷೀರ್ ಅಹ್ಮದ್, ಅಮಿರ್ ಜಾನ್, ಜೆಬಿಟಿ ಬಾಬು, ಸಂಘಟನೆ ಉಪಾಧ್ಯಕ್ಷರಾದ ಗಂಗಾಧರ್, ಕೀರ್ತಿ, ಮುರುಗೇಶ್, ಅಭಿಲಾಷ್, ವಿನಯ್, ರಮೇಶ್ ನಾಯ್ಕ, ಎಸ್. ಎಸ್ ಭೈರಪ್ಪ, ಬಿ ಎಡ್ ಕಾಲೇಜಿನ ವಿದ್ಯಾರ್ಥಿಗಳು, ಸಂಘಟನೆ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment