Saturday, August 6, 2022

ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮ

ಭದ್ರಾವತಿ ಜನ್ನಾಪುರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಹಳೇನಗರದ ಸರ್ಕಾರಿ ಬಾಲಕಿಯರ ಫ್ರೌಡಶಾಲೆಯ ಹೆಣ್ಣು ಮಕ್ಕಳಿಗೆ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಆ. ೬: ಜನ್ನಾಪುರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಹಳೇನಗರದ ಸರ್ಕಾರಿ ಬಾಲಕಿಯರ ಫ್ರೌಡಶಾಲೆಯ ಹೆಣ್ಣು ಮಕ್ಕಳಿಗೆ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಟ್ರಸ್ಟ್ ಕಾರ್ಯದರ್ಶಿ ಬಿ. ಅನ್ನಪೂರ್ಣ ಇತ್ತಿಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ಮಾತನಾಡಿ, ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು. ಟ್ರಸ್ಟ್ ಖಜಾಂಚಿ ಎನ್. ನಾಗವೇಣಿ  ವರ್ಣದಿಂದ ಆಗುತ್ತಿರುವ ತಾರತಮ್ಯ, ಕೀಳರಮೆ ಕುರಿತು ಮಾತಾನಾಡಿದರು.
    ಶಾಲೆಯ ಮುಖ್ಯೋಪಾಧ್ಯಾಯಿನಿ ಕೆಂಚಮ್ಮ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕಿ ಆರ್. ಮಂಜುಳಾ ನಿರೂಪಿಸಿ, ಜಂಟಿ ಕಾರ್ಯದರ್ಶಿ ಅಂತೋಣಿರಾಜ್ ಸ್ವಾಗತಿಸಿ, ವಂದಿಸಿದರು.

No comments:

Post a Comment