ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು' ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.
ಭದ್ರಾವತಿ, ಆ. ೪: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು' ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.
ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರವನ್ನು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಉದ್ಘಾಟಿಸಿದರು.
ವಿಐಎಸ್‌ಎಲ್ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ. ಎಂ.ವೈ ಸುರೇಶ್, ಸುಬ್ಬಯ್ಯ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಗ ವಿಭಾಗದ ಮುಖ್ಯಸ್ಥರಾದ ಡಾ. ಹರೀಶ್ ಪೈ, ಡಾ. ಸಂದೀಪ್ ಕುಬ್ಸಾದ್, ಸಹಾಯಕ ಮುಖ್ಯಸ್ಥ ಡಾ. ಶರತ್, ಸಹಾಯಕ ವೈದ್ಯರಾದ ಡಾ. ಶಾನ್ ಮತ್ತು ಡಾ. ಶಾಜಿಯಾ ಅವರನ್ನೊಳಗೊಂಡ ತಂಡ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿತು. ಕಾರ್ಖಾನೆಯ ಕಾಯಂ, ಗುತ್ತಿಗೆ ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರು ಸೇರಿದಂತೆ ಒಟ್ಟು ೭೬ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.
ವಿಐಎಸ್‌ಎಲ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು' ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು.
No comments:
Post a Comment