ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಭಾರತ ಮಾತೆಯ ಭಾವಚಿತ್ರ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ, ಆ. ೭: ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಪ್ರಪಂಚದಲ್ಲಿ ಯಾರೂ ಸಹ ನಿರೀಕ್ಷಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲೂ ಇಂತಹ ಆಚರಣೆ ಅಸಾಧ್ಯ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
ಅವರು ಭಾನುವಾರ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಾರಿ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಭಾರತ ಮಾತೆಗೆ ಗೌರವ ತಂದುಕೊಡುವ ನಿಟ್ಟಿನಲ್ಲಿ ಪಣ ತೊಟ್ಟಿದ್ದಾರೆ. ಇಂತಹ ಆಚರಣೆ ಪ್ರಪಂಚದಲ್ಲಿ ಯಾರು ನಕಲು ಮಾಡಲು ಸಹ ಸಾಧ್ಯವಿಲ್ಲ. ಪ್ರತಿ ಮನೆ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಾಡಬೇಕೆಂಬ ಅವರ ಕಲ್ಪನೆ ಅದ್ಭುತವಾಗಿದೆ. ಇಂತಹ ಮಹತ್ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬರು ಹೆಚ್ಚಿನ ಶ್ರಮವಹಿಸಬೇಕೆಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ಭಾರತ ಮಾತೆ ಭಾವಚಿತ್ರ ಅನಾವರಣಗೊಳಿಸಿ ಸಭೆ ಉದ್ಘಾಟಿಸಿದರು. ರಾಷ್ಟ್ರ ಧ್ವಜ ಅನಾವರಣಗೊಳಿಸುವ ಜೊತೆಗೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ಧ್ವಜಗಳನ್ನು ವಿತರಿಸಲಾಯಿತು.
ಪಕ್ಷದ ಪ್ರಮುಖರಾದ ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ಬಿ.ಎಸ್ ನಾರಾಯಣಪ್ಪ, ಮ್ಯಾಮ್‌ಕೋಸ್ ನಿರ್ದೇಶಕ ವಿರುಪಾಕ್ಷಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಕ್ಷದ ಪ್ರಮುಖರಾದ ಎಸ್. ಕುಮಾರ್, ವಿ. ಕದಿರೇಶ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ಚನ್ನೇಶ್, ಕೆ. ಮಂಜುನಾಥ್, ಬಿ.ಕೆ ಚಂದ್ರಪ್ಪ, ಕರೀಗೌಡ, ಜಿ. ಆನಂದಕುಮಾರ್, ಚಂದ್ರು ದೇವರನರಸೀಪುರ, ಮಂಜುನಾಥ್, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸಾವಂತ್, ಮಂಜುಳ, ಕವಿತಾ ರಾವ್, ಅನ್ನಪೂರ್ಣ, ರೇಖಾ ಪದ್ಮಾವತಿ, ನಾಗಮಣಿ ಸೇರಿದಂತೆ ಪಕ್ಷದ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಪಾಲ್ಗೊಂಡಿದ್ದರು. ಆನಂದ್ ನಿರೂಪಿಸಿದರು.
No comments:
Post a Comment