ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬೃಹತ್ ರಾಷ್ಟ್ರ ಧ್ವಜ ಅನಾವರಣಗೊಳಿಸಲಾಗಿದೆ.
ಭದ್ರಾವತಿ, ಆ. ೧೪: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಆ.೧೫ರಂದು ಬೆಳಿಗ್ಗೆ ೯ ಗಂಟೆಗೆ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಖಾನೆಯ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಪ್ರಮುಖರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿಕೊಡುವಂತೆ ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖ್ಯ ವ್ಯವಸ್ಥಾಪಕ ಎಲ್. ಪ್ರವೀಣ್‌ಕುಮಾರ್ ಕೋರಿದ್ದಾರೆ.
ಬೃಹತ್ ಧ್ವಜ ಅನಾವರಣ :
ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬೃಹತ್ ರಾಷ್ಟ್ರ ಧ್ವಜ ಅನಾವರಣಗೊಳಿಸಲಾಗಿದೆ.
ಕಾರ್ಖಾನೆ ವತಿಯಿಂದ ಕಳೆದ ಸುಮಾರು ೧ ವರ್ಷದಿಂದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಹಲವಾರು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ಮುಕ್ತಾಯಗೊಳ್ಳುವ ಜೊತೆಗೆ ಬಹುತೇಕ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದವು. ಕಾರ್ಖಾನೆ ಮುಂಭಾಗ ರಾಷ್ಟ್ರ ಧ್ವಜ ಆ.೧೫ರ ಸಂಜೆವರೆಗೂ ಅನಾವರಣಗೊಳ್ಳಲಿದೆ.
No comments:
Post a Comment