Saturday, August 6, 2022

ಆ.೭ರಂದು ಭದ್ರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಬಾಗಿನ ಸಮರ್ಪಣೆ

    ಭದ್ರಾವತಿ, ಆ. ೬: ಮಲೆನಾಡು, ಅರೆ ಮಲೆನಾಡು ಹಾಗು ಬಯಲು ಸೀಮೆಯ ಭಾಗದ ಜೀವನದಿ ತಾಲೂಕಿನ ಭದ್ರಾ ನದಿ ಈ ಬಾರಿ ಸಹ ತುಂಬಿ ಹರಿಯುತ್ತಿದ್ದು, ಅದರಲ್ಲೂ ಎರಡು ಬಾರಿ ಜಲಾಶಯಪೂರ್ಣಗೊಂಡಿರುವುದು ಸಂತಸದ ಸಂಗತಿಯಾಗಿದೆ. ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಆ.೭ರಂದು ಸರ್ವಧರ್ಮಗಳ ಗುರುಗಳ ಸಮ್ಮುಖದಲ್ಲಿ ಬಾಗಿನ ಸಮರ್ಪಿಸಲಿದ್ದಾರೆ.
    ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಗಂಗಾ ಪೂಜೆಯೊಂದಿಗೆ ಸರ್ವಧರ್ಮಗಳ ಗುರುಗಳ ಸಮ್ಮುಖದಲ್ಲಿ ಬಾಗಿನ ಸಮರ್ಪಿಸಲಿದ್ದಾರೆ.
    ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕೋರಿದ್ದಾರೆ.

No comments:

Post a Comment