ವಿದ್ಯಾರ್ಥಿಗಳು, ಶಿಕ್ಷಕರ ಪರಿಶ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮೆಚ್ಚುಗೆ
ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಸುಮಾರು ೨೫೦ ವಿದ್ಯಾರ್ಥಿಗಳು ಆಕರ್ಷಕ ಮಾದರಿಗಳನ್ನು ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ವಿದ್ಯಾರ್ಥಿಗಳು ಹಾಗು ಶಿಕ್ಷಕರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು
ಭದ್ರಾವತಿ, ಆ. ೧೩ : ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ತಾಲೂಕಿನಾದ್ಯಂತ ವಿಭಿನ್ನವಾಗಿ ನಡೆಯುತ್ತಿದ್ದು, ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಸುಮಾರು ೨೫೦ ವಿದ್ಯಾರ್ಥಿಗಳು ಆಕರ್ಷಕ ಮಾದರಿಗಳನ್ನು ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ.
ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿರುವ ಮಾದರಿಗಳನ್ನು ಎಲ್ಲಾ ವಿದ್ಯಾರ್ಥಿಗಳು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.
ವಿದ್ಯಾರ್ಥಿಗಳು ಕಾಗದ, ಹಣ್ಣು, ತರಕಾರಿ, ಅನ್ನ, ದವಸ ಧಾನ್ಯಗಳು ಸೇರಿದಂತೆ ದಿನ ಬಳಕೆ ವಸ್ತುಗಳನ್ನು ಬಳಸಿ ತಮ್ಮಲ್ಲಿನ ಪ್ರತಿಭೆಗಳನ್ನು ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅನಾವರಣಗೊಳಿಸಿದ್ದಾರೆ. ಪ್ರತಿಯೊಂದು ಮಾದರಿ ಸಹ ಆಕರ್ಷಕವಾಗಿದ್ದು, ದೇಶದ ಸ್ವಾತಂತ್ರ್ಯ ಯೋಧರು, ಸಂಸ್ಕೃತಿ, ಮಹಾನ್ ಆದರ್ಶ ವ್ಯಕ್ತಿಗಳು, ಐತಿಹಾಸಿಕ ಸ್ಮಾರಕಗಳು, ಕೃಷಿ, ಶಿಕ್ಷಣ, ಕೈಗಾರಿಕೆ ತಂತ್ರಜ್ಞಾನ ಬೆಳವಣಿಗೆ, ಭಾರತೀಯ ಸೇನೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ, ವಿವಿಧತೆಯಲ್ಲಿ ಏಕತೆ ಪ್ರತಿಪಾದನೆ ಸೇರಿದಂತೆ ಹಲವಾರು ವಿಚಾರಗಳ ಮಾಹಿತಿ ಕೋಶಗಳಂತೆ ಕಂಡು ಬಂದವು.
ಮಾದರಿಗಳನ್ನು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ವಿದ್ಯಾರ್ಥಿಗಳು ಹಾಗು ಶಿಕ್ಷಕರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು
ಶಾಲಾ ಸಂಯೋಜಕರಾದ ಪರಮೇಶ್ವರಪ್ಪ, ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಉಪಪ್ರಾಂಶುಪಾಲ ಪ್ರಸನ್ನ, ಪ್ರೌಢಶಾಲಾ ಕನ್ನಡ ವಿಭಾಗದ ಮುಖ್ಯ ಶಿಕ್ಷಕರಾದ ಬಿ.ಸಿ ವಿನಯ್, ಬಿ.ವಿ ಸುಜಾತ, ಪೂರ್ವಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ಸೇರಿದಂತೆ ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಉಪಸ್ಥಿತರಿದ್ದರು.
ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿರುವ ಮಾದರಿ.
No comments:
Post a Comment