ಶಾರದಮ್ಮ ಚಂದ್ರಗುಂಡಯ್ಯ
ಭದ್ರಾವತಿ, ಆ. ೨೨: ನಗರಸಭೆ ವಾರ್ಡ್ ನಂ.೨೦ರ ಸುರಗಿತೋಪು ನಿವಾಸಿ ಶಾರದಮ್ಮ ಚಂದ್ರಗುಂಡಯ್ಯ(೭೮) ಸೋಮವಾರ ನಿಧನ ಹೊಂದಿದರು.
ನಾಲ್ಕು ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಸಂಸ್ಕಾರ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ಮಧ್ಯಾಹ್ನ ೧೧ ನೆರವೇರಲಿದೆ. ಶಾರದಮ್ಮನವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಶಾಸಕ ಬಿ.ಕೆ.ಸಂಗಮೇಶ್ವರ್, ಪ್ರಮುಖರಾದ ಸಿದ್ದಲಿಂಗಯ್ಯ, ಸುವರ್ಣಮ್ಮ ಹೀರೇಮಠ್, ಟಿ.ಜಿ.ಬಸವರಾಜಯ್ಯ ಸೇರಿದಂತೆ ಇತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment