ಪಿ.ಬಿ ಅಶೋಕ್
ಭದ್ರಾವತಿ, ಆ. ೫: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ನ್ಯಾಯವಾದಿ ಪಿ.ಬಿ ಅಶೋಕ್(೪೯) ನಿಧನ ಹೊಂದಿದರು.
ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಸುಮಾರು ೨೦ ವರ್ಷಗಳಿಗೂ ಹೆಚ್ಚು ಕಾಲದಿಂದ ನ್ಯಾಯವಾದಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನ್ಯಾಯವಾದಿಗಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಪದಾಧಿಕಾರಿಯಾಗಿ ಹಾಗು ತಾಲೂಕು ವಕೀಲರ ಸಂಘದ ಪದಾಧಿಕಾರಿಯಾಗಿ ಸಹ ಸೇವೆ ಸಲ್ಲಿಸಿದ್ದರು. ಶುಕ್ರವಾರ ಮಧ್ಯಾಹ್ನ ಅಂತರಗಂಗೆ ಗ್ರಾಮದಲ್ಲಿರುವ ಇವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿತು.
ಇವರ ನಿಧನಕ್ಕೆ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ತಾಲೂಕು ವಕೀಲರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment