ಡಿಚ್ಚಿ ಮುಬಾರಕ್
ಭದ್ರಾವತಿ, ಆ. ೨೧ : ಇತ್ತಿಚೆಗೆ ನೆಹರು ನಗರದಲ್ಲಿ ವೈಯಕ್ತಿಕ ಕಾರಣಕ್ಕೆ ನಡೆದಿದ್ದ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಡಿಚ್ಚಿ ಮುಬಾರಕ್ ವಿರುದ್ಧ ಗಾಂಜಾ ಸೇವನೆ ಪ್ರಕರಣ ದಾಖಲಾಗಿದೆ.
ನೆಹರೂ ನಗರದ ರಾಜೇಶ್ವರಿ ದೇವಾಲಯದ ಬಳಿ ನಡೆದುಕೊಂಡು ಹೋಗುತ್ತಿದ್ದ ಸುನಿಲ್ ಮೇಲೆ ಮುಬಾರಕ್ ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆಸಿದ್ದನು. ಈ ಸಂಬಂಧ ಪೊಲೀಸರು ಮುಬಾರಕ್‌ನನ್ನು ಬಂಧಿಸಿದ್ದರು.
ವಿಚಾರಣೆ ಸಂದರ್ಭದಲ್ಲಿ ಗಾಂಜಾ ಸೇವನೆ ಅನುಮಾನದಲ್ಲಿ ಪೊಲೀಸರು ಮುಬಾರಕ್‌ನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದರು. ತಪಾಸಣಾ ವರದಿಯಲ್ಲಿ ಮುಬಾರಕ್ ಗಾಂಜಾ ಸೇವಿಸಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment