Tuesday, August 9, 2022

ಗೋಡೆ ಕುಸಿದು ಬಿದ್ದು ಮೃತಪಟ್ಟ ಮಹಿಳೆ ಅಂತ್ಯ ಸಂಸ್ಕಾರ : ೫ ಲಕ್ಷ ರು. ಪರಿಹಾರ ವಿತರಣೆ

ಗೋಡೆ ಕುಸಿದು ಬಿದ್ದ ಪರಿಣಾಮ ಮೃತಪಟ್ಟ ಮಹಿಳೆ ಭಾಗ್ಯಮ್ಮ
    ಭದ್ರಾವತಿ, ಆ. ೯: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸೋಮವಾರ ನಗರಸಭೆ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ಭಾಗ್ಯಮ್ಮ(೬೨) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಮಂಗಳವಾರ ನಡೆಯಿತು.
    ಸೋಮವಾರ ರಾತ್ರಿ ನಡೆದ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಕೃಷ್ಣಮೂರ್ತಿ ಎಂಬುವರು ಗಾಯಗೊಂಡಿದ್ದು, ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಭಾರಿ ಮಳೆ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಭಾಗ್ಯಮ್ಮ ಎಂಬುವರ ಮನೆ ಗೋಡೆ ಕುಸಿದಿರುವುದು.
    ಮೃತಪಟ್ಟ ಭಾಗ್ಯಮ್ಮನವರ ಅಂತ್ಯಸಂಸ್ಕಾರ ಮಧ್ಯಾಹ್ನ ಸುಮಾರು ೧೨.೩೦ಕ್ಕೆ ಗ್ರಾಮದ ಸ್ಮಶಾನ ಭೂಮಿಯಲ್ಲಿ ನೆರವೇರಿತು. ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಪರಿಷತ್ ಸದಸ್ಯ ಡಿ.ಎಸ್ ಅರುಣ್, ತಹಸೀಲ್ದಾರ್ ಆರ್. ಪ್ರದೀಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ಗ್ರಾಮದ ಮುಖಂಡ ಮಂಜುನಾಥ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ವಿವಿಧ ಪಕ್ಷಗಳ  ಸೇರಿದಂತೆ ಇನ್ನಿತರರು ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.


ಗೋಡೆ ಕುಸಿದು ಬಿದ್ದ ಪರಿಣಾಮ ಮೃತಪಟ್ಟ ಮಹಿಳೆ ಭಾಗ್ಯಮ್ಮನವರ ಅಂತ್ಯ ಸಂಸ್ಕಾರ ಮಂಗಳವಾರ ನಡೆಯಿತು. ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
    ಪ್ರವಾಹ ಸಂತ್ರಸ್ಥರ ನಿಧಿಯಿಂದ ಹಾನಿಯಾದ ಮನೆ ಪುನರ್ ನಿರ್ಮಾಣಕ್ಕೆ ೫ ಲಕ್ಷ ರು. ಹಾಗು ಮೃತಪಟ್ಟ ಮಹಿಳೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ೨ ಲಕ್ಷ ರು. ಒಟ್ಟು ೭ ಲಕ್ಷ ರು. ಈ ಪೈಕಿ ಸ್ಥಳದಲ್ಲಿಯೇ ೫ ಲಕ್ಷ ರು. ಪರಿಹಾರದ ಚೆಕ್ ಕುಟುಂಬಸ್ಥರಿಗೆ ವಿತರಿಸಲಾಯಿತು.

No comments:

Post a Comment