ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್‌ಟೌನ್ ಇಂಗ್ಲೀಷ್ ಟೀಚರ್‍ಸ್ ಪೋರಮ್) ವತಿಯಿಂದ ಆಯೋಜಿಸಲಾಗಿದ್ದ ಆಂಗ್ಲ ಭಾಷಾ ಕಾರ್ಯಾಗಾರದಲ್ಲಿ ಬಿ.ಸಿದ್ದಬಸಪ್ಪ, ಕೆ. ಬಸವರಾಜಪ್ಪ ಮತ್ತು ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಆ. ೨: ಪ್ರಸ್ತುತ ಆಂಗ್ಲ ಭಾಷೆ ಕಲಿಕೆ ಬಹುಮುಖ್ಯವಾಗಿದ್ದು, ಭವಿಷ್ಯದಲ್ಲಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು.
ಅವರು ನಗರದ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್‌ಟೌನ್ ಇಂಗ್ಲೀಷ್ ಟೀಚರ್‍ಸ್ ಪೋರಮ್) ವತಿಯಿಂದ ಆಯೋಜಿಸಲಾಗಿದ್ದ ಆಂಗ್ಲ ಭಾಷಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಲಿಕಾ ಚೇತರಿಕೆ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಇದ್ದ ಎಲ್ಲಾ ತೊಡಕುಗಳು ಇದೀಗ ಬಗೆಹರಿದಿವೆ. ಇಂಗ್ಲೀಷ್ ಕಲಿಕಾ ಚೇತರಿಕೆಯಲ್ಲಿರುವ ಎಲ್ಲಾ ಚಟುವಟಿಕೆಗಳು ಪಠ್ಯ ಪುಸ್ತಕಕ್ಕೆ ಪೂರಕವಾಗಿವೆ. ಒಟ್ಟಾರೆ ಕಲಿಕಾ ನ್ಯೂನತೆಗಳು ಇದರಿಂದ ದೂರವಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ಕೆ. ಬಸವರಾಜಪ್ಪ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೀಜ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಿವಾಕರ್ ಎಂ, ಜಯಕುಮಾರ್, ಇಮ್ತಿಯಾಜ್, ಪ್ರಕಾಶ್ ಮತ್ತು ಅಶ್ವಿನಿ ಜಾಧವ್ ಪಾಲ್ಗೊಂಡಿದ್ದರು.
No comments:
Post a Comment