ಭದ್ರಾವತಿ ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಆಟೋ ಜಾಥಾ ಕಾರ್ಯಕ್ರಮದಲ್ಲಿ ತಾಲೂಕು ಆಟೋ ಚಾಲಕರ, ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷಣ್‌ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಆ. ೧೩: ಪ್ರತಿಯೊಬ್ಬರಲ್ಲೂ ರಾಷ್ಟ್ರಪ್ರೇಮ, ದೇಶಭಕ್ತಿ ಎಂಬುದು ಜಾಗೃತವಾಗಿದೆ ಎಂಬುದನ್ನು ಆಟೋ ಚಾಲಕರು ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ತಾಲೂಕು ಆಟೋ ಚಾಲಕರ, ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷಣ್ ಹೇಳಿದರು.
ಅವರು ಶನಿವಾರ ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಆಟೋ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ರಾಷ್ಟ್ರಪ್ರೇಮ, ದೇಶಭಕ್ತಿ ಅಭಿವ್ಯಕ್ತಗೊಳಿಸಬೇಕೆಂಬ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಆಟೋ ಚಾಲಕರು, ಮಾಲೀಕರು ಬದ್ದರಾಗಿದ್ದಾರೆ. ಪ್ರತಿಯೊಬ್ಬರು ಸಹ ದೇಶಾಭಿಮಾನ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿ ಜಾಥಾ ಆಯೋಜಿಸಿದ್ದ ತಾಲೂಕು ಆಡಳಿತ ಮತ್ತು ನಗರಸಭೆಗೆ ಕೃತಜ್ಞತೆ ಸಲ್ಲಿಸಿದರು.
ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ಸದಸ್ಯರಾದ ವಿ. ಕದಿರೇಶ್, ಉದಯ್‌ಕುಮಾರ್, ಜಾರ್ಜ್, ಬಸವರಾಜ ಆನೇಕೊಪ್ಪ, ಅನುಸುಧಾ ಮೋಹನ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಪ್ರಭಾರ ಕಾರ್ಯಪಾಲಕ ಅಭಿಯಂತರ ಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್.ಬಿ ಸತೀಶ್, ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಇಂಜಿನಿಯರ್‌ಗಳಾದ ಎಸ್.ಆರ್ ಸತೀಶ್, ಕೆ.ಜಿ ಸಂತೋಷ್ ಪಾಟೀಲ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ಕಟ್ಟಡ ಕಾರ್ಮಿಕರ ಸಂಘದ ಅಭಿಲಾಷ್ ಹಾಗು ನಗರಸಭೆ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಆಟೋ ಜಾಥಾ ಹುತ್ತಾಕಾಲೋನಿ ಬಸ್ ನಿಲ್ದಾಣದಿಂದ ಆರಂಭಗೊಂಡು, ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತ, ವಿಐಎಸ್‌ಎಲ್ ಜೋಡಿ ರಸ್ತೆ, ಜಯಶ್ರೀ ವೃತ್ತ ಮತ್ತು ಹುಡ್ಕೋ ಕಾಲೋನಿ ಪ್ರೊ ಬಿ. ಕೃಷ್ಣಪ್ಪ ವೃತ್ತ, ಪುನಃ ಹಿಂದಿರುಗಿ ಉಂಬ್ಳೆಬೈಲ್ ರಸ್ತೆ ಮೂಲಕ ರಂಗಪ್ಪ ವೃತ್ತ ತಲುಪಿ ನಂತರ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಅಂತ್ಯಗೊಳಿಸಲಾಯಿತು.
No comments:
Post a Comment