ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಆ. ೩ : ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
ರೇವಣಪ್ಪ ಅವರು ಶಿಕ್ಷಕ ವೃತ್ತಿಯೊಂದಿಗೆ ಜಾನಪದ ಸಾಹಿತ್ಯ, ರಂಗಭೂಮಿ ಕಲೆಯನ್ನು ಸಹ ಮೈಗೂಡಿಸಿಕೊಂಡಿದ್ದು, ರಾಷ್ಟ್ರ ಹಾಗು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.
ರೇವಣಪ್ಪ ಅವರನ್ನು ಸನ್ಮಾನಿಸಿದ ಶಾಸಕರು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಜಾನಪದ ಸಾಹಿತ್ಯ, ರಂಗಭೂಮಿ ಕಲೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಯುವ ಮುಖಂಡ ಬಿ.ಎಸ್ ಗಣೇಶ್, ಬುಲೆಟ್ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಭಾರತಿ, ಬಾಳೆಮಾರನಹಳ್ಳಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಗಣೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದದಸ್ಯರುಗಳಾದ ಡಿ.ಎಸ್ ಬಸವಂತರಾವ್ ದಾಳೆ, ಆರ್.ಟಿ ಲೋಹಿತ್, ಯು. ಮಹಾದೇವಪ್ಪ, ಎ.ಕೆ ಲಿಂಗರಾಜು, ದೇವರಾಜ್ ನಾಯ್ಕ್, ಅನವೇರಿ ಜಗದೀಶ್, ನರಸಿಂಹಮೂರ್ತಿ, ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment