ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಭದ್ರಾವತಿ, ಆ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಭಗವಾನ್ ಶ್ರೀ ಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ನೆರವೇರಿಸಲಾಯಿತು. ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ರಿಯಾಜ್ ಅಹಮದ್, ಕಂದಾಯಾಧಿಕಾರಿ ರಾಜ್‌ಕುಮಾರ್, ಬಿಜೆಪಿ ಮುಖಂಡ ಟಿ. ವೆಂಕಟೇಶ್, ಗೊಲ್ಲ ಯಾದವ ಸಮಾಜದ ಹಿರಿಯರಾದ ಗೋವಿಂದಪ್ಪ, ಸಮಾಜದ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗೋವಿಂದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಳ್ಳಿಕಟ್ಟೆ ಪ್ರಕಾಶ್ ಸ್ವಾಗತಿಸಿದರು. ಸರ್ಕಾರಿ ಐಟಿಐ ತರಬೇತಿದಾರ ಪುಟ್ಟಲಿಂಗ ಮೂರ್ತಿ ಮತ್ತು ಎಂ. ರಮೆಶ್ ನಿರೂಪಿಸಿದರು. ನ್ಯಾಯವಾದಿ ಟಿ.ಎಸ್ ರಾಜು ವಂದಿಸಿದರು.
No comments:
Post a Comment