ಭದ್ರಾವತಿ, ಆ. ೫; ತಾಲೂಕಿನಾದಾದ್ಯಂತ ಆ.೬ರಂದು ಹವಮಾನ ಇಲಾಖೆ ಸೂಚನೆಯಂತೆ ಬಾರಿ ಮಳೆಯಾಗಲಿದ್ದು, ಈ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್‌ರವರು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಭದ್ರಾ ಜಲಾಶಯದಿಂದ ಪ್ರಸ್ತುತ ೩೦,೦೦೦ ಕ್ಯೂಸೆಕ್ಸ್ ನೀರು ನದಿಗೆ ಬಿಡಲಾಗುತ್ತಿದ್ದು, ಅಲ್ಲದೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹೊರಬಿಡುವ ಸಾಧ್ಯತೆ ಹೆಚ್ಚಾಗಿದೆ. ನದಿ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗು ಅಧಿಕಾರಿಗಳು ತುರ್ತು ಸಂದರ್ಭಗಳಿಗೆ ಸಿದ್ದರಿರುವಂತೆ ಸೂಚಿಸಿದ್ದಾರೆ.
No comments:
Post a Comment