ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಹೇಬ್ ಅವರನ್ನು ಶನಿವಾರ ಭದ್ರಾವತಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಆ. ೧೩: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಹೇಬ್ ಅವರನ್ನು ಶನಿವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ವತಿಯಿಂದ ಹಳೇನಗರದ ಜಾಮೀಯ ಶಾದಿ ಮಹಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಅಬ್ದುಲ್ ಜಬ್ಬಾರ್ ಸಾಹೇಬ್ ಅವರು ೩ ಬಾರಿ ಪರಿಷತ್ ಸದಸ್ಯರಾಗುವ ಜೊತೆಗೆ ಪಕ್ಷದ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮವಹಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ನಾಗರೀಕರ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್‌ಬಾನು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಸಿ.ಎಂ ಖಾದರ್, ಅಮೀರ್ ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment