Saturday, August 6, 2022

ಪುನಃ ಹೊಸ ಸೇತುವೆ ಮುಳುಗಡೆ : ಪ್ರವಾಹ ಭೀತಿ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿ ನೀರಿನ ಏಕಾಏಕಿ ಹೆಚ್ಚಾಗಿದ್ದು, ಹೊಸ ಸೇತುವೆ ಶನಿವಾರ ಸಂಜೆ ಮುಳುಗಡೆಗೊಂಡಿದೆ.
    ಭದ್ರಾವತಿ, ಆ. ೬: ನಗರದ ಹೃದಯ ಭಾಗದಲ್ಲಿ ಭದ್ರಾ ನದಿ ನೀರಿನ ಏಕಾಏಕಿ ಹೆಚ್ಚಾಗಿದ್ದು, ಹೊಸ ಸೇತುವೆ ಶನಿವಾರ ಸಂಜೆ ಮುಳುಗಡೆಗೊಂಡಿದೆ.
    ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ ಬಿಟ್ಟಿರುವ ಹಿನ್ನಲೆಯಲ್ಲಿ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲಿನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸೇತುವೆ ಎರಡು ಬದಿಯಲ್ಲೂ ಸಂಚಾರಿ ಪೊಲೀಸರು ಬ್ಯಾರಿಗೇಡ್‌ಗಳನ್ನು ಅಳವಡಿಸಿದ್ದು, ಸೇತುವೆ ಸಮೀಪ ಯಾರು ಸುಳಿಯದಂತೆ ಎಚ್ಚರ ವಹಿಸಿದ್ದಾರೆ.
    ಈ ನಡುವೆ ಪುನಃ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳಿಸುವುದು ಅನಿವಾರ್ಯವಾಗಿದೆ. ರಾತ್ರಿ ವೇಳೆ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.

No comments:

Post a Comment