ಭದ್ರಾವತಿ, ಆ. ೮: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸೋಮವಾರ ಕಾಚಗೊಂಡನಹಳ್ಳಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಗೃಹಿಣಿಯೋರ್ವಳು ಮೃತಪಟ್ಟಿರುವ ಘಟನೆ ನಡೆದಿದೆ.
ನಗರಸಭೆ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ಭಾಗ್ಯಮ್ಮ(62) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೃಷ್ಣಮೂರ್ತಿ ಎಂಬುವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದೆಡೆ ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೊಳೆಹೊನ್ನೂರು ಗೇಜ್ ಮಾಹಿತಿಯಂತೆ ರಾತ್ರಿ ೧೦ರ ವೇಳೆಗೆ ಜಲಾಶಯದ ಒಳ ಹರಿವು ೭೬,೦೦೦ ಕ್ಯೂಸೆಕ್ಸ್ ಹೊಂದಿದ್ದು, ೧೮೩.೮ ಅಡಿ ಭರ್ತಿಯಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಲಾಶಯದ ೪ ಕ್ರಸ್ಟ್ ಗೇಟ್‌ಗಳನ್ನು ೧೦ ಅಡಿ ತೆರೆದು ೫೬,೧೦೪.೨೯ ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ತಿಳಿಸಿದ್ದಾರೆ.
No comments:
Post a Comment