ಭದ್ರಾವತಿ, ಆ. ೧೨ : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ 'ಹರ್ ಘರ್ ತಿರಂಗಾ' ಅಭಿಯಾನದ ಪ್ರಯುಕ್ತ ನಗರಸಭೆ ವತಿಯಿಂದ ಆ.೧೩ರಂದು ೮.೩೦ಕ್ಕೆ ಆಟೋ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ, ತರೀಕೆರೆ ರಸ್ತೆಯ ಗಾಂಧಿ ವೃತ್ತದವರೆಗೆ ರ್‍ಯಾಲಿ ನಡೆಯುತ್ತಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
ಜೈನ ಸಮಾಜದಿಂದ ಬೈಕ್ ರ್‍ಯಾಲಿ :
'ಹರ್ ಘರ್ ತಿರಂಗಾ' ಅಭಿಯಾನದ ಪ್ರಯುಕ್ತ ಹಳೇನಗರದ ಜೈನ ಸಮಾಜದ ವತಿಯಿಂದ ಆ.೧೩ರಂದು ಬೆಳಿಗ್ಗೆ ೧೦.೩೦ಕ್ಕೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.
ರ್‍ಯಾಲಿ ಕನಕಮಂಟಪ ಮೈದಾನದಿಂದ ಆರಂಭಗೊಂಡು ರಂಗಪ್ಪ ವೃತ್ತ, ಮಾಧವಚಾರ್‌ವೃತ್ತ, ಗಾಂಧಿ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದವರೆಗೆ ಸಾಗಿ ಹೊಸಸೇತುವೆ ಮೂಲಕ ಜೈನ ಮಂದಿರ ತಲುಪಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೈನ ಸಮಾಜದ ಮುಖಂಡ ಸಂಪತ್‌ರಾಜ್ ಬಾಂಟಿಯಾ ಕೋರಿದ್ದಾರೆ.
No comments:
Post a Comment