Saturday, August 6, 2022

ಶಾಲೆ ಬಳಿ ಇಸ್ಪೀಟ್ ಜೂಜಾಟ : ಪ್ರಕರರಣ ದಾಖಲು


    ಭದ್ರಾವತಿ, ಆ. ೬: ಹಳೇನಗರದ ಜಟ್‌ಪಟ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
    ಹಳೇನಗರ ಠಾಣೆ ಪೊಲೀಸರು ಶುಕ್ರವಾರ ಸಂಜೆ ಈ ಭಾಗದ ಬೀಟ್ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸುಮಾರು ೮ ರಿಂದ ೧೦ ಜನರ ಗುಂಪೊಂದು ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದ್ದು, ತಕ್ಷಣ ದಾಳಿ ನಡೆಸಿ ಇವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

No comments:

Post a Comment