ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಜೊತೆ ಚರ್ಚೆ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಭದ್ರಾವತಿ, ಆ. ೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು, ಕಾರ್ಖಾನೆಯ ವಸತಿ ಗೃಹಗಳನ್ನು ದೀರ್ಘಾವಧಿ ಬಾಡಿಗೆಗೆ ನೀಡುವುದು, ಮೆಡಿ ಕ್ಲೈಮ್ ಇನ್ಸೂರೆನ್ಸ್ ಪಾಲಿಸಿಯಿಂದ ವಂಚಿತರಾದ ನಿವೃತ್ತ ಕಾರ್ಮಿಕರಿಗೆ ಉಪಯೋಗವಾಗುವಂತೆ ಅವಕಾಶ ಕಲ್ಪಿಸಿಕೊಡುವುದು. ೩೩ ತಿಂಗಳ ಅವಧಿಗೆ ವಸತಿ ಗೃಹಗಳ ಕರಾರು ನವೀಕರಣಗೊಳಿಸುವುದು ಹಾಗು ಖಾಲಿ ಇರುವ ಸುಮಾರು ೫೦೦ ವಸತಿ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ಬಾಡಿಗೆಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಂಸದರು ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದರು.
ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಸೈಲ್ ನಿವೃತ್ತ ಕಾರ್ಮಿಕರ ಸಂಘದ ಕೇಂದ್ರ ಒಕ್ಕೂಟದ ಉಪಾಧ್ಯಕ್ಷ ಸಿ.ಎಸ್ ನಾಗಭೂಷಣ್ ಹಾಗು ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment