ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಮೋಚಿಗಾರ ಜನಾಂಗದ ಮಹಿಳೆಯರ ಘಟಕ(ಎಸ್.ಸಿ ಮೋಚಿ)ದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭದ್ರಾವತಿ, ಸೆ. ೧ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶಿವಮೊಗ್ಗ ಜಿಲ್ಲಾ ಮೋಚಿಗಾರ ಜನಾಂಗದ ಮಹಿಳೆಯರ ಘಟಕ(ಎಸ್.ಸಿ ಮೋಚಿ)ದ ಉದ್ಘಾಟನೆ ಸೆ.೪ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ಬಸವೇಶ್ವರ ವೃತ್ತ ಸಮೀಪದಲ್ಲಿರುವ ಬಲಿಜ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಎನ್. ರೇಖಾ ತಿಳಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋಚಿಗಾರ ಜನಾಂಗದವರು ಕುಲಕಸುಬು ನಂಬಿಕೊಂಡು ಬದುಕು ಸಾಗಿಸಿದವರು. ಹಿಂದುಳಿದ ಜನಾಂಗವಾಗಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗು ರಾಜಕೀಯ ಶೋಷಣೆಗೆ ಒಳಗಾಗಿದ್ದಾರೆ. ಈ ನಡುವೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅದರಲ್ಲೂ ಈ ಜನಾಂಗದ ಮಹಿಳೆಯರ ಸಮಸ್ಯೆಗಳು ಹೆಚ್ಚಿನದ್ದಾಗಿವೆ. ಈ ನಿಟ್ಟಿನಲ್ಲಿ ಸಂಘಟನೆ ಅಗತ್ಯ ಮನಗಂಡು ಶಿವಮೊಗ್ಗ ಜಿಲ್ಲಾ ಮೋಚಿಗಾರ ಜನಾಂಗದ ಮಹಿಳೆಯರ ಘಟಕ(ಎಸ್.ಸಿ ಮೋಚಿ) ಅಸ್ತಿತ್ವಕ್ಕೆ ತರಲಾಗಿದೆ ಎಂದರು.
ನೂತನ ಘಟಕವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಅಖಿಲ ಕರ್ನಾಟಕ ಮೋಚಿಗಾರ ಸಂಘದ ರಾಜ್ಯಾಧ್ಯಕ್ಷ ಶಿವಪ್ಪ ಜೆ. ಮುಳಗುಂದ ಅಧ್ಯಕ್ಷತೆ ವಹಿಸಲಿದ್ದಾರೆ. ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್, ಮೋಚಿಗಾರ ಸಂಘದ ಜಿಲ್ಲಾಧ್ಯಕ್ಷ ಆರ್. ಸತ್ಯನಾರಾಯಣ್, ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಉಪಾಧ್ಯಕ್ಷೆ ಪಿ. ಶೋಭಾ, ಕಾರ್ಯದರ್ಶಿ ಎಂ.ಎಲ್ ಶಾಂತಮ್ಮ, ಸಹಕಾರ್ಯದರ್ಶಿ ಸುಶೀಲಾ, ಖಜಾಂಚಿ ಎನ್. ಪಾರ್ವತಿದೇವಿ, ತರೀಕೆರೆ ಘಟಕದ ಅಧ್ಯಕ್ಷೆ ಶ್ವೇತ ಮತ್ತು ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
No comments:
Post a Comment