ಭದ್ರಾವತಿ, ಸೆ. ೧೩ : ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ಸೆ.೧೬ರಂದು ಬೆಳಿಗ್ಗೆ ೧೧ ಗಂಟೆಗೆ ಸಾಮಾನ್ಯ ಸಭೆ ನಡೆಯಲಿದೆ.
ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ. ಚನ್ನಪ್ಪ ಅವರು ಪ್ರಭಾರ ಅಧ್ಯಕ್ಷರಾಗಿ ನೇಮಕಗೊಂಡ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ವಾರ್ಡ್ ನಂ.೨ರ ಕಾಂಗ್ರೆಸ್ ಸದಸ್ಯೆ ಗೀತಾರಾಜ್‌ಕುಮಾರ್ ಅವರು ಒಪ್ಪಂದದಂತೆ ಮೊದಲ ೧೦ ತಿಂಗಳ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಉಪಾಧ್ಯಕ್ಷ ಚನ್ನಪ್ಪ ಅವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ.
No comments:
Post a Comment