ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್.
ಭದ್ರಾವತಿ, ಸೆ. ೨೮: ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೋರ್ವ ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ನಡೆದಿದೆ.
ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್(೩೬) ಮೃತಪಟ್ಟಿದ್ದು, ಈತ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೆಎಸ್‌ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮತಪಟ್ಟಿದ್ದಾನೆ.
ಈ ರಸ್ತೆಯಲ್ಲಿ ಶಾಲಾ-ಕಾಲೇಜು, ಪೊಲೀಸ್ ಠಾಣೆ, ಚರ್ಚ್ ಗಳು ಅಧಿಕವಾಗಿವೆ. ಈ ರಸ್ತೆಯನ್ನು ಇತ್ತೀಚೆಗೆ ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕಲ್ಪಿಸಿಕೊಡಲಾಗಿದೆ. ಆದರೂ ಸಹ ಈ ರಸ್ತೆಯಲ್ಲಿ ವಾಹನ ದಟ್ಟನೆ ಅಧಿಕವಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಅಲ್ಲದೆ ವೇಗ ಮಿತಿ ಇಲ್ಲದಿರುವುದು ಸಹ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ವಾಹನ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿಕೊಂಡಿರುವುದು.
No comments:
Post a Comment