ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ, ಸೆ. ೨೪: ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಬೆಳಿಗ್ಗೆ ನಗರದ ರಂಗಪ್ಪ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದ ಮೂಲಕ ಮಧ್ಯಾಹ್ನ ೧ ಗಂಟೆಗೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪ ತಲುಪಿತು.
ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್ ಹಾಗು ನಗರಸಭಾ ಸದಸ್ಯರು, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಪೌರನೌಕರರ ಪೌರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಎಸ್‌ಎಸ್ ಪ್ರಮುಖರಾದ ಸತ್ಯ, ಚಿನ್ನಯ್ಯ, ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಪೌರಾಯುಕ್ತ ಮನುಕುಮಾರ್ ಪೌರಕಾರ್ಮಿಕರೊಂದಿಗೆ ಸಂಭ್ರಮಿಸಿದರು.
No comments:
Post a Comment