ಭದ್ರಾವತಿ ನಗರದ ಶ್ರೀ ಕನ್ಯಕಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘದ ಗೌರವಾಧ್ಯಕ್ಷ ಕಾ.ರಾ ನಾಗರಾಜ್‌ರವರಿಗೆ ಬೆಂಗಳೂರು ಅರ್.ಟಿ ನಗರದ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಗಾಂಧಿ ಪ್ರಿಯ ಪ್ರಶಸ್ತಿ ನೀಡಿ ಗೌರವಿಸಿದೆ.
ಭದ್ರಾವತಿ, ಸೆ. ೧೯ : ನಗರದ ಶ್ರೀ ಕನ್ಯಕಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘದ ಗೌರವಾಧ್ಯಕ್ಷ ಕಾ.ರಾ ನಾಗರಾಜ್‌ರವರಿಗೆ ಬೆಂಗಳೂರು ಅರ್.ಟಿ ನಗರದ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಗಾಂಧಿ ಪ್ರಿಯ ಪ್ರಶಸ್ತಿ ನೀಡಿ ಗೌರವಿಸಿದೆ.
ತುಮಕೂರು ಜಿಲ್ಲಾ ಆರ್ಯವೈಶ್ಯ ಮಹಿಳಾ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕಾ.ರಾ ನಾಗರಾಜ್‌ರವರು ಶ್ರೀ ಕನ್ಯಕಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಸುಮಾರು ೧೫ ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಈ ಹಿಂದೆ ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.
ಕಾ.ರಾ ನಾಗರಾಜ್ ಕೇವಲ ಆರ್ಯವೈಶ್ಯ ಸಮಾಜಕ್ಕೆ ಸೀಮಿತವಾಗದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅಲ್ಲದೆ ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ. ಕಲಾ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಗಾಂಧಿ ಪ್ರಿಯ ಪ್ರಶಸ್ತಿ ನೀಡಲಾಗಿದೆ.
ತುಮಕೂರು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆದ ಸಮಾವೇಶದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಪ್ರಶಸ್ತಿ ಪ್ರಧಾನ ಮಾಡಿದರು. ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಡಾ.ಆರ್.ಎಲ್ ರಮೇಶ್, ಕರ್ನಾಟಕ ಆರ್ಯವೈಶ್ಯ ಮಹಾಮಂಡಲ ಮಹಿಳಾ ವಿಭಾಗದ ಅಧ್ಯಕ್ಷೆ ಗೋಕುಲ ಚಲಪತಿ, ಕರ್ನಾಟಕ ಆರ್ಯವೈಶ್ಯ ಮಹಿಳಾ ಮಹಾಸಭಾ ಅಧ್ಯಕ್ಷೆ ಸುಧಾಮೂರ್ತಿ, ತುಮಕೂರು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಶಶಿಕುಮಾರ್, ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ರಾ. ವಿಜಯ ಸಮರ್ಥ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment