ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಸೆ. ೩೦: ಮಕ್ಕಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಹಕಾರಿಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಕಲ್ಪಿಸಿಕೊಟ್ಟಿರುವ ಶಿಕ್ಷಣ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಸಹ ನೀಡಬೇಕು. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ದೇಶದ ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದರು.
ವೇದಿಕೆಯಲ್ಲಿ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಡಿ. ಪ್ರಭಾಕರ ಬೀರಯ್ಯ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ. ಪೃಥ್ವಿರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಸರ್ಕಾರಿ ನೌಕರರ ಸಂಘದ ಶ್ರೀಧರಗೌಡ, ಬಸವಂತರಾವ್ ದಾಳೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೆ.ಬಿ ಬಸವರಾಜಪ್ಪ, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಸವರಾಜ ಹಾಗು ವಿವಿಧ ಕ್ಲಸ್ಟರ್‌ಗಳ ಸಿಆರ್‌ಪಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳಾದ ಪ್ರಭು, ನವೀದ್ ಪರ್ವೀಜ್ ಅಹಮದ್, ರವಿಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿಯರಾದ ವಿಜಯಲಕ್ಷ್ಮಿ ಪ್ರಾರ್ಥಿಸಿದರು. ತುಳಸಿ ಬಾಯಿ ನಿರೂಪಿಸಿದರು.
No comments:
Post a Comment