ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಕಾಲೇಜಿನ ಪ್ರಾಂಶುಪಾಲ ಡಾ. ಧನಜಂಜಯ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಸೆ. ೧೭: ವಿದ್ಯಾರ್ಥಿಗಳು ಶಿಕ್ಷಣವಂತರಾಗುವ ಜೊತೆಗೆ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶನಿವಾರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಒಳ್ಳೆಯ ಗುಣಗಳನ್ನು ಹೊಂದಿರುವವರನ್ನು ಜನರು ಗುರುತಿಸುತ್ತಾರೆ. ಉತ್ತಮ ಪ್ರಜೆಯಾಗಿ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.
ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಮಾತನಾಡಿ, ಸಾವಿರಾರು ಜನರಿಗೆ ಶಿಕ್ಷಣ ನೀಡಿರುವ ಈ ಕಾಲೇಜು ತನ್ನದೇ ಆದ ಪರಂಪರೆ, ವಿಶಿಷ್ಟತೆಯನ್ನು ಹೊಂದಿದೆ. ನಾನು ಸಹ ಈ ಕಾಲೇಜಿನಲ್ಲಿಯೇ ವಿದ್ಯಾಭ್ಯಾಸ ಮಾಡುವ ಮೂಲಕ ಸಮಾಜದಲ್ಲಿ ಎಲ್ಲಾ ರೀತಿಯಿಂದಲೂ ಬೆಳವಣಿಗೆ ಹೊಂದಲು ಈ ಕಾಲೇಜಿನ ಶಿಕ್ಷಣ ವ್ಯವಸ್ಥೆ ಇಂದಿಗೂ ಪೂರಕವಾಗಿದೆ. ಇಂತಹ ಕಾಲೇಜಿನ ಪರಿಸರವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೂರಕವಾದ ಎಲ್ಲಾ ಸೌಲಭ್ಯಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ವೈದ್ಯ ಡಾ. ನರೇಂದ್ರ ಭಟ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಪಿ ಸರ್ವಮಂಗಳ, ಮಣಿ ಎಎನ್‌ಎಸ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅನಿಲ್‌ಕುಮಾರ್, ಎ. ಚಂದ್ರಶೇಖರ್, ಜಯರಾಜ್, ಅಭಿದಾಲಿ, ಪ್ರಾನ್ಸಿಸ್, ಬಿ.ಕೆ ಪ್ರಮೋದ್‌ಕುಮಾರ್, ಎಂ. ಮುಸ್ವೀರ್ ಬಾಷಾ, ಜಿ. ಕಿರಣ್, ಇಸ್ರಾಯಿಲ್, ವಿನೋದ್ ವಿನ್ಸಂಟ್ ಮತ್ತು ಕೆ. ಮೋಹನ್ ರಾಜ್, ಅಮೋಸ್, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ. ವರದರಾಜ ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್‌ಖಾನ್, ಡಾ. ಡಿ. ಶಿವಲಿಂಗೇಗೌಡ, ಎಂ. ವೆಂಕಟೇಶ್, ಆರ್. ಸೀಮಾ, ಬಿ. ಗುರುಪ್ರಸಾದ್, ಡಾ. ದ್ರಾಕ್ಷಾಯಿಣಿ ಎಂ. ಡೋಂಗ್ರೆ ಮತ್ತು ಆರ್. ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದಕ್ಕೂ ಕಾಲೇಜಿನ ಮುಖ್ಯದ್ವಾರದಲ್ಲಿ ಕಾಲೇಜಿನ ಆವರಣದಲ್ಲಿ ಕೈಗೊಳ್ಳಲಾಗಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದರು. ಮಧ್ಯಾಹ್ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
No comments:
Post a Comment