ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶನಿವಾರ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ಸೆ. ೧೭: ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶನಿವಾರ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಮಂಡಲ ತಾಲೂಕು ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ರಕ್ತದಾನ ಶಿಬರಕ್ಕೂ ಮೊದಲು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಕ್ಷದ ಪ್ರಮುಖರಾದ ಎಸ್. ಕುಮಾರ್, ವಿ. ಕದಿರೇಶ್, ಕೆ. ಮಂಜುನಾಥ್, ಮಂಗೋಟೆ ರುದ್ರೇಶ್, ಕೃಷ್ಣ ಛಲವಾದಿ, ನಕುಲ್, ಗೋಕುಲ್ ಕೃಷ್ಣ, ರಾಜಶೇಖರ್ ಉಪ್ಪಾರ, ಪಿ. ಗಣೇಶ್‌ರಾವ್, ರಾಮಲಿಂಗಯ್ಯ, ಕರೀಗೌಡ, ಎಂ. ಪ್ರಭಾಕರ್, ಧನುಷ್ ಬೋಸ್ಲೆ, ವಿಜಯ್, ರಾಮನಾಥ ಬರ್ಗೆ, ಆರ್.ಎಸ್ ಶೋಭಾ, ಅನ್ನಪೂರ್ಣ ಸಾವಂತ್, ಶೋಭಾ ಪಾಟೀಲ್, ಮಂಜುಳಾ, ಅನುಷಾ, ಶಕುಂತಲ, ನಾಗಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment