ಭದ್ರಾವತಿ ಜನ್ನಾಪುರ ಕೆರೆ ಸಮೀಪದ ಹೊಸ ಸಿದ್ದಾಪುರ ರಸ್ತೆಯಲ್ಲಿರುವ ನಾಗರಕಟ್ಟೆ ದೇವಸ್ಥಾನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅಶ್ವತ್ ಕಟ್ಟೆ, ನಾಗರಕಟ್ಟೆ ಸೇವಾ ಸಮಿತಿ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಸೆ. ೧೪: ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯ ಕೇವಲ ಒಂದು ಪ್ರದೇಶಕ್ಕೆ, ಒಂದು ದೇಶಕ್ಕೆ, ರಾಷ್ಟ್ರಕ್ಕೆ ಸೀಮಿತ ಅಲ್ಲ ಇಡೀ ಜನ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಎಂದು ಪೌರಾಯುಕ್ತ ಮನುಕುಮಾರ್ ಹೇಳಿದರು.
ಅವರು ಬುಧವಾರ ನಗರದ ಜನ್ನಾಪುರ ಕೆರೆ ಸಮೀಪದ ಹೊಸ ಸಿದ್ದಾಪುರ ರಸ್ತೆಯಲ್ಲಿರುವ ನಾಗರಕಟ್ಟೆ ದೇವಸ್ಥಾನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅಶ್ವತ್ ಕಟ್ಟೆ, ನಾಗರಕಟ್ಟೆ ಸೇವಾ ಸಮಿತಿ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಬಂದ ನಂತರ ಸರ್.ಎಂ ವಿಶ್ವೇಶ್ವರಾಯ ಅವರ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಸಾಧ್ಯವಾಗಿದೆ. ಇಲ್ಲಿನ ಜನರು ಅವರ ಮೇಲೆ ಹೊಂದಿರುವ ಗೌರವ, ಪ್ರೀತಿ, ವಿಶ್ವಾಸ ಹಾಗು ಅಭಿಮಾನ ಹೆಚ್ಚಿನದಾಗಿದೆ. ಇದನ್ನು ಗಮನಿಸಿದಾಗ ಅವರು ಕೇವಲ ಒಂದು ರಾಜ್ಯ, ದೇಶ, ರಾಷ್ಟ್ರಕ್ಕೆ ಸೀಮಿತವಲ್ಲ ಇಡೀ ಜನ ಸಮುದಾಯಕ್ಕೆ ಸೇರಿದವರು ಎಂಬ ಭಾವನೆ ಮೂಡುತ್ತಿದೆ. ವಿಐಎಸ್‌ಎಲ್ ಹಾಗೂ ಎಂಪಿಎಂ ಎರಡು ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಇಲ್ಲಿನ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ ಎಂದರು.
ಕಾರ್ಖಾನೆಗಳು ಈ ದೇಶದ ಬೆನ್ನೆಲುಬು ಎಂಬ ಅವರ ನಿಲುವು ಹಾಗೂ ಆ ದಾರಿಯಲ್ಲಿ ಸಾಗಿಬಂದ ಅವರ ಬದುಕು. ಅವರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಪ್ರಾಮಾಣಿಕತೆ, ಸಮಯ ಪಾಲನೆ, ಶಿಸ್ತು ಬದ್ಧತೆ ಇಂದಿಗೂ ಆದರ್ಶಪ್ರಾಯವಾಗಿದೆ ಎಂದರು.
ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ, ಸರ್ ಎಂ ವಿಶ್ವೇಶ್ವರಾಯ ಅವರು ನಾಡಿಗೆ, ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅದರಲ್ಲೂ ಈ ಕ್ಷೇತ್ರದ ಜನರು ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮನೋಹರ್, ಶಿವಣ್ಣ ಗೌಡ, ಅಭಿಲಾಶ್, ನಾಗಭೂಷಣ್, ನಗರಸಭಾ ಸದಸ್ಯರಾದ ರಿಯಾಜ್ ಅಹಮದ್, ಆರ್. ಶ್ರೇಯಸ್(ಚಿಟ್ಟೆ), ನಾಗರಕಟ್ಟೆ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ್, ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment