ಭದ್ರಾವತಿ ಕಾಗದನಗರದ ಚಂದ್ರಾಲಯದಲ್ಲಿ ಸೋಮವಾರ ನಡೆದ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ವಾರ್ಷಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಮಾತನಾಡಿದರು.
ಭದ್ರಾವತಿ, ಸೆ. ೧೯: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಸಂಪೂರ್ಣವಾಗಿ ಸ್ಥಗಿತಗೊಂಡು ಸುಮಾರು ೭ ವರ್ಷಗಳು ಕಳೆದಿವೆ. ಈ ನಡುವೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಕಾರ್ಮಿಕರು ರೂಪಿಸಿಕೊಂಡಿರುವ ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಲವು ಸಮಸ್ಯೆಗಳ ನಡುವೆ ಹೆಣಗಾಡುತ್ತಿದೆ. ಸಂಕಷ್ಟದ ಪರಿಸ್ಥಿತಿಯಲ್ಲೂ ಸೋಮವಾರ ಕಾಗದನಗರದ ಚಂದ್ರಾಲಯದಲ್ಲಿ ಸರ್ವ ಸದಸ್ಯರ ಸಭೆ ನಡೆಸುವ ಮೂಲಕ ತಮ್ಮ ಅಳಲನ್ನು ತೋರ್ಪಡಿಸಿಕೊಂಡರು.
ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೆಕ್ಕಪತ್ರ ಮಂಡನೆ, ೨೦೨೨-೨೩ನೇ ಸಾಲಿನ ಅಂದಾಜು ಆಯವ್ಯಯ ಪಟ್ಟಿ ಮಂಡನೆ, ಲೆಕ್ಕ ಪರಿಶೋಧಕರ ನೇಮಕ ಹಾಗು ಸಂಘ ಎದುರಿಸುತ್ತಿರುವ ಸಮಸ್ಯೆಗಳು ಹಾಗು ಮುಂದಿರುವ ಸವಾಲುಗಳ ಕುರಿತು ಚರ್ಚಿಸಲಾಯಿತು. ಸಭೆ ಆರಂಭದಲ್ಲಿ ನಿಧನ ಹೊಂದಿದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು.
ಸಂಘದ ಉಪಾಧ್ಯಕ್ಷ ವಿ. ಗೋವಿಂದಪ್ಪ, ಕಾರ್ಯದರ್ಶಿ ಎಚ್. ವೀರಭದ್ರಪ್ಪ, ನಿರ್ದೇಶಕರಾದ ಪಿ.ಆರ್ ರಂಗಸ್ವಾಮಿ, ಎಸ್.ಆರ್ ಸೋಮಶೇಖರ್, ಪರಮಶಿವ, ಎಚ್. ಆನಂದಮೂರ್ತಿ, ಮಂಜುನಾಥ್ ಮತ್ತು ಕೆ. ಸಾರಮ್ಮ ಉಪಸ್ಥಿತರಿದ್ದರು.
No comments:
Post a Comment