Sunday, September 4, 2022

ಸೈಲ್ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ಕ್ರೀಡಾಕೂಟಗಳಿಗೆ ವಿಐಎಸ್‌ಎಲ್ ಕ್ರೀಡಾಂಗಣ ಉಚಿತ

ಎಲ್. ಪ್ರವೀಣ್‌ಕುಮಾರ್
   
 ಭದ್ರಾವತಿ, ಸೆ. ೪: ಭಾರತೀಯ ಉಕ್ಕು ಪ್ರಾಧಿಕಾರ ತನ್ನ ೫೦ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಹಾಗು ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ  ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಉಚಿತವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ ಎಂದು ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ತಿಳಿಸಿದರು.
    ಕಾರ್ಖಾನೆ ತನ್ನ ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕ್ರೀಡಾಪಟುಗಳಿಗೆ ನೆರವಾಗಬೇಕೆಂಬ ಉದ್ದೇಶದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಭದ್ರಾ ವಲಯ, ತುಂಗಾ ವಲಯ, ತುಂಗಾ-ಭದ್ರಾ ವಲಯ, ಕಾವೇರಿ ವಲಯ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ಹಾಗು ದಸರಾ ಕ್ರೀಡಾ ಕೂಟದ ಆಯ್ಕೆ ಸ್ಪರ್ಧೆಗಳನ್ನು ಆಯೋಜಿಸಲು ಅವಕಾಶ ನೀಡಲಾಗಿದೆ ಎಂದರು.


    ಮುಂದೊಂದು ದಿನ ಈ ಕ್ರೀಡಾಪಟುಗಳು ಎತ್ತರಕ್ಕೆ ಬೆಳೆದು ಕೀರ್ತಿ ತರಲಿ ಎಂಬ ಆಶಯ ಸಂಸ್ಥೆ ಹೊಂದಿದೆ. : ಭಾರತೀಯ ಉಕ್ಕು ಪ್ರಾಧಿಕಾರ ತನ್ನ ೫೦ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಹಾಗು ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸಿದೆ ಎಂದರು.
    ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ದೈಹಿಕ ಶಿಕ್ಷಕ ಶಿವಲಿಂಗೇಗೌಡ ಮಾತನಾಡಿ, ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಕಾರಿಯಾಗಿದೆ. ಈ ಬಾರಿ ಉಚಿತವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲು ಅವಕಾಶ ನೀಡಿರುವುದಕ್ಕೆ ಕಾರ್ಖಾನೆ ಆಡಳಿತ ಮಂಡಳಿಗೆ ಶಿಕ್ಷಣ ಇಲಾಖೆ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲೂ ಇದೆ ರೀತಿ ನೆರವಾಗುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.




No comments:

Post a Comment