ಭದ್ರಾವತಿಯಲ್ಲಿ ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಧರ್ಮ ಚಕ್ರ ಸಂಸ್ಥೆ ಸಹಯೋಗದೊಂದಿಗೆ 'ಸಾವಯವ ಸಿರಿ' ಯೋಜನೆಯಡಿ ರೈತರಿಗೆ ಸಾವಯವ ಕೃಷಿ , ಸಾವಯವ ಪ್ರಮಾಣೀಕರಣ ಹಾಗೂ ಮೌಲ್ಯವರ್ಧನೆ ಬಗ್ಗೆ ತರಬೇತಿ ಆಯೋಜಿಸಲಾಗಿತ್ತು.
ಭದ್ರಾವತಿ, ಸೆ. ೧೨ : ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಧರ್ಮ ಚಕ್ರ ಸಂಸ್ಥೆ ಸಹಯೋಗದೊಂದಿಗೆ 'ಸಾವಯವ ಸಿರಿ' ಯೋಜನೆಯಡಿ ರೈತರಿಗೆ ಸಾವಯವ ಕೃಷಿ , ಸಾವಯವ ಪ್ರಮಾಣೀಕರಣ ಹಾಗೂ ಮೌಲ್ಯವರ್ಧನೆ ಬಗ್ಗೆ ತರಬೇತಿ ಆಯೋಜಿಸಲಾಗಿತ್ತು.
ಕೃಷಿ ವಿಜ್ಞಾನ ಕೇಂದ್ರದ ಆಹಾರ ತಜ್ಞೆ ಜ್ಯೋತಿ ರಾಥೋಡ್ ಮಾತನಾಡಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಬಗ್ಗೆ ಮಾಹಿತಿ ನೀಡಿದರು. ಸಾವಯವ ಪ್ರಮಾಣೀಕರಣ ಕುರಿತು ನಯನ ಮಾಹಿತಿ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಬಿ.ಸಿ ಶಶಿಧರ್ ಮಾತನಾಡಿ, ರೈತ ಬಾಂಧವರು ಪಿ.ಎಂ ಕಿಸಾನ್ ಯೋಜನೆಯಡಿ ತಮ್ಮ ೧೨ನೇ ಕಂತಿನ ಸಹಾಯಧನ ಪಡೆಯಬೇಕಾದಲ್ಲಿ ಸೆ. ೧೪ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಕೋರಿದರು.
ಕೃಷಿ ಅಧಿಕಾರಿ ಸುನಿತಾ, ಸಂದೀಪ್ ಕುಮಾರ್, ತಾಲೂಕು ವ್ಯವಸ್ಥಾಪಕ ಬಿ. ರಾಕೇಶ್ ಹಾಗೂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment