ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯೋಗ ದಸರಾ ಯಶಸ್ವಿಯಾಗಿ ನಡೆಯಿತು.
ಭದ್ರಾವತಿ, ಸೆ. ೩೦: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯೋಗ ದಸರಾ ಯಶಸ್ವಿಯಾಗಿ ನಡೆಯಿತು.
ವಿವಿಧ ಯೋಗ ಸಮಿತಿಗಳ ಸಹಕಾರದೊಂದಿಗೆ ಬೆಳಿಗ್ಗೆ ಮಾಧವಚಾರ್ ವೃತ್ತದಿಂದ ಕನಕ ಮಂಟಪ ಮೈದಾನದವರೆಗೆ ಆಯೋಜಿಸಲಾಗಿದ್ದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ಚಾಲನೆ ನೀಡಿದರು.
ಕನಕಮಂಟಪ ಮೈದಾನದಲ್ಲಿ ಯೋಗಾಸನ ಪ್ರದರ್ಶನದ ಮೂಲಕ ಯೋಗ ಕುರಿತು ಜಾಗೃತಿ ಮೂಡಿಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್ ಹಾಗು ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭಾ ಸದಸ್ಯರು, ವಿವಿಧ ಯೋಗ ಸಮಿತಿಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment